For the best experience, open
https://m.navayuganews.com
on your mobile browser.
Advertisement

ಬೆಂಗಳೂರು: ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಸೇವೆಗಳಿಗೆ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪ ವನ್ನು ಮಾತ್ರ ಬಳಸಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಸೂಚಿಸಿದೆ.

Advertisement

ಈ ಬಗ್ಗೆ ಮಾತನಾಡಿರುವ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಕೂಡಾ
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವಟ ದೇವಾಲಯಗಳಲ್ಲಿ ಪ್ರಸಾದ‌ ಸಿದ್ದಪಡಿಸಲು ಶುದ್ದ ನಂದಿನಿ ತುಪ್ಪವನ್ನೇ ಬಳಸಬೇಕೆಂದು ತಿಳಿಸಿದ್ದಾರೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲೂ ಸೇವೆಗಳು, ದೀವಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕೂಡಾ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಸೂಚಿಸಲಾಗಿದೆ.

ಎಲ್ಲಾ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

Advertisement
Tags :
Advertisement