For the best experience, open
https://m.navayuganews.com
on your mobile browser.
Advertisement

ಮೈಸೂರು,ಆ.8: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮೇಲಿರುವ ಮೂಡ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪ ನಿವಾರಣೆಯಾಗಲಿ ಎಂದು ಹಾರೈಸಿ ಅಭಿಮಾನಿಗಳು 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Advertisement

ಈ ವೇಳೆ ಮಾತನಾಡಿದ ಅಭಿಮಾನಿ
ಶಿವಕುಮಾರ್,ಸಿಎಂ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ಮಾಡುತ್ತಿದ್ದಾರೆ, ಬಡವರ ಪರವಾಗಿರುವ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಸಿದ್ದರಾಮಯ್ಯ ಅವರಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳು ದೂರವಾಗಲಿ,ಎಂದು ವಿಘ್ನ ನಿವಾರಕ ವಿಘ್ನೇಶ್ವರನಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ದುರುದ್ದೇಶದಿಂದ ತೇಜೋವಧೆ ಮಾಡಲು ಹೊರಟಿರುವ ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಯಶಸ್ಸು ಸಿಗುವುದಿಲ್ಲ
ಎಂದು ಹೇಳಿದರು.

ಅಭಿಮಾನಿಗಳಾದ ಮಲ್ಲಿಕಾರ್ಜುನ, ಸುಗಂಧರಾಜಕುಮಾರ್, ಆಟೋ ಮಹದೇವ್, ಕುಮಾರ್, ಅವಿನಾಶ್, ರವಿಕುಮಾರ್ ಮತ್ತಿತರರು ಹಾಜರಿದ್ದರು.

Advertisement
Tags :
Advertisement