For the best experience, open
https://m.navayuganews.com
on your mobile browser.
Advertisement

ಮೈಸೂರು, ಸೆ.5 : ಪ್ರಪಂಚದಲ್ಲಿ ಹಲವಾರು ರೀತಿಯ ವೃತ್ತಿಗಳಿವೆ. ಆದರೆ ಅವೆಲ್ಲವುಗಳಲ್ಲೇ ಶ್ರೇಷ್ಠವಾದದ್ದು ಶಿಕ್ಷಕ ವೃತ್ತಿ ಎಂದು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಂ.ರಾಮಪ್ರಸಾದ್ ತಿಳಿಸಿದರು.

ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಬ್ಬ ವಿದ್ಯಾರ್ಥಿಗೆ ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಬೋಧನೆ ಮಾಡಿ ಅವನನ್ನು ಉನ್ನತ ಮಟ್ಟಕ್ಕೆ ಕರೆದೊಯ್ಯುವವರೇ ಶಿಕ್ಷಕರು ಎಂದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಿ.ಆರ್.ದಿನೇಶ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನ ಗೌರವಿಸಿ ಅವರು ಹೇಳಿದ ಬೋಧನೆಯನ್ನು ಪ್ರಾಮಾಣಿಕವಾಗಿ ಸ್ವೀಕರಿಸಿದರೆ ಅವರ ಜೀವನವನ್ನು ಅವರೇ ರೂಪಿಸಿಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತನ್ನ ಹೇಳಿದರು.

ಶಿಕ್ಷಕರ ದಿನದ ಅಂಗವಾಗಿ ಶಾಲೆಯಲ್ಲಿ ಶಿಕ್ಷಕರಿಗೆ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಎಲ್ಲರಿಗೂ ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಅಶ್ವತ್, ನಾರಾಯಣಗೌಡ, ಲಿಂಗನಸ್ವಾಮಿ, ರಂಗಸ್ವಾಮಿ, ಟಿ.ಕೆ ರವಿ, ಸ್ವಾಮಿಗೌಡ, ನಾಗರಾಜು ಮುಂತಾದವರು ಉಪಸ್ಥಿತರಿದ್ದರು.

Advertisement
Tags :
Advertisement