ನೇಣು ಬಿಗಿದ ಸ್ಥಿತಿಯಲ್ಲಿ ಪತಿ, ಪತ್ನಿ ಶವ ಪತ್ತೆ
07:27 PM Nov 14, 2024 IST
|
ಅಮೃತ ಮೈಸೂರು
Advertisement
ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ದೊಡ್ಡ ಹೊನ್ನೂರು ಕಾವಲಿನ ಬಳಿ ನೇಣುಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆಯಾಗಿದೆ.
Advertisement
ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನೂರು ಕಾವಲಿನ ಜಮೀನೊಂದರಲ್ಲಿರುವ ಹಳೆಯ ಖಾಲಿ ಮನೆಯಲ್ಲಿ ದಂಪತಿ ದೇಹಗಳು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.
ಪಿರಿಯಾಪಟ್ಟಣ ತಾಲ್ಲೂಕು ಕೊಪ್ಪ ಗ್ರಾಮದ ನಿವಾಸಿಗಳಾದ ಸುರೇಶ್ (40) ಮತ್ತು ಅವರ ಪತ್ನಿ ಪಲ್ಲವಿ (28) ಮೃತ ದಂಪತಿ.
ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಸುರೇಶ್ ಉದ್ಯಮದಲ್ಲಿ ನಷ್ಟ ಹೊಂದಿದ್ದು ಬೇಸರಗೊಂಡಿದ್ದರು ಜತೆಗೆ ಸಾಲಗಾರರ ಕಿರುಕುಳದಿಂದ ನೊಂದಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.
ಸಾಲಗಾರರ ಹಿಂಸೆಯಿಂದ ನೊಂದು ಪತಿ,ಪತ್ನಿ ಆತ್ಮಹತ್ಯೆಗೆ ಶರಣಾಗಿರಬಹುದೆ ಅಥವಾ ನೇಣು ಬಿಗಿದ ಸ್ಥಿತಿಯಲ್ಲಿ ದೇಹಗಳು ಪತ್ತೆಯಾಗಿರುವುದರಿಂದ ಯಾರಾದರೂ ಕೊಲೆ ಮಾಡಿ ನೇಣು ಹಾಕಿ ಹೋಗಿರಬಹುದೆ
ಎಂಬ ಅನುಮಾನ ಕಾಡುತ್ತಿದ್ದು ತನಿಖೆಯಿಂದ ಸತ್ಯ ಗೊತ್ತಾಗಬೇಕಿದೆ.
ಬೈಲುಕುಪ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Advertisement
Next Article