HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಸರ್ಕಾರಿ ಜಾಗ ಸಿಕ್ಕರೆ ಬೊಕ್ಕಹಳ್ಳಿ ಗ್ರಾಮ ಸ್ಥಳಾಂತರಕ್ಕೆ ಚಿಂತನೆ:ಸಚಿವ ಮಹದೇವಪ್ಪ

ನಂಜನಗೂಡು ತಾಲ್ಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಅವರೊಂದಿಗೆ ಸಚಿವ ಮಹದೇವಪ್ಪ ಜನರ ಸಮಸ್ಯೆ ಆಲಿಸಿದರು
11:50 AM Aug 04, 2024 IST | ಅಮೃತ ಮೈಸೂರು
Advertisement

ಮೈಸೂರು, ಆ.4: ಹೆಚ್ಚು ಮಳೆಯಿಂದಾಗಿ ಬೊಕ್ಕಹಳ್ಳಿ ಗ್ರಾಮಕ್ಕೆ ಹೆಚ್ಚು ನೀರು ನುಗ್ಗಿದೆ, ಸರ್ಕಾರಿ ಜಾಗ‌ ಸಿಕ್ಕಿದರೆ ಗ್ರಮ ಸ್ಥಳಾಂತರಕ್ಕೆ ಚಿಂತಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಮಹಾದೇವಪ್ಪ
ಹೇಳಿದರು.

Advertisement

ಬೊಕ್ಕಹಳ್ಳಿ ಗ್ರಾಮಸ್ಥರು ಗ್ರಾಮದ ಸ್ಥಳಾಂತರಕ್ಕೆ ಒತ್ತಾಯಿಸುತಿದ್ದಾರೆ,ಆದರೆ ಅಂತಹ ಸಂದರ್ಭ ಸೃಷ್ಟಿಯಾಗಿಲ್ಲ,ಅದರೂ ಗ್ರಾಮಸ್ಥರ ಮನವಿ ಮೇರೆಗೆ ಸರ್ಕಾರಿ ಜಾಗದ ಲಭ್ಯತೆ ಇದ್ದರೆ ಗ್ರಾಮ ಸ್ಥಳಾಂತರಿಸಲು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ನಂಜನಗೂಡು ತಾಲ್ಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಅವರೊಂದಿಗೆ ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.

ಈ ಬಾರಿ ಹೊಳೆಯಿಂದ 80 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಂದುದರಿಂದ ಗ್ರಾಮದ ಕೆಲ ಜಮೀನುಗಳು ಮುಳುಗಡೆಯಾಗಿದೆ.

80 ಮನೆಗಳಿಗೆ ನೀರು ನುಗ್ಗಿದ್ದು, 215 ಜನರನ್ನು ಸ್ಥಳಾಂತರಿಸಲಾಗಿದೆ. 78 ಜನ ಕಾಳಜಿ ಕೇಂದ್ರದಲ್ಲಿ ಉಳಿದಿದ್ದಾರೆ. ಜಿಲ್ಲಾಡಳಿತ ತಗ್ಗಿನ ಪ್ರದೇಶದ ಮನೆಗಳವರಿಗೆ ಊಟ,ವಸತಿಯೊಂದಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಿದೆ ಎಂದು ತಿಳಿಸಿದರು.

ಒಟ್ಟಾರೆ ಜಿಲ್ಲೆಯಲ್ಲಿ 345 ಮನೆಗಳಿಗೆ ಹಾನಿಯಾಗಿದೆ,256 ಮನೆಗಳಿಗೆ ಪರಿಹಾರ ನೀಡಲಾಗಿದೆ, 268 ಮನೆಗಳಿಗೆ ಭಾಗಶಃ ಹಾನಿಯಾಗಿವೆ ಇವುಗಳಿಗೆ ಎನ್.ಡಿ.ಆರ್.ಎಫ್ ನಿಯಮಾವಳಿಯಂತೆ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ 220 ಶಾಲೆಗಳು,60 ಅಂಗನವಾಡಿ‌ ಕೇಂದ್ರಗಳು, 40 ರಿಂದ 50 ಕಿಮೀ ಗ್ರಾಮೀಣ ರಸ್ತೆ, 25 ಕಿಮೀ ಪಿಡ್ಲೂಡಿ ರಸ್ತೆ ಹಾಳಾಗಿದೆ ಎಂದು ಮಹದೇವಪ್ಪ‌ ವಿವರಿಸಿದರು.

ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ, ಜಿ.ಪಂ.ಸಿಇಒ ಕೆ.ಎಂ.ಗಾಯತ್ರಿ,ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

Advertisement
Tags :
Bokkahallu VillageDr.MahadevappaMysoreNanjanagudu
Advertisement
Next Article