HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಆಕರ್ಷಕ ಜಂಬೂಸವಾರಿ ಮೆರವಣಿಗೆ:ನಾಳೆ ಮಧ್ಯಾಹ್ನ‌‌ ವಿದ್ಯುಕ್ತ ಚಾಲನೆ

05:44 PM Oct 11, 2024 IST | ಅಮೃತ ಮೈಸೂರು
Advertisement

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಜಂಬೂಸವಾರಿ ಮೆರವಣಿಗೆಗೆ ಅ.12 ರಂದು ಮಧ್ಯಾಹ್ನ ವಿದ್ಯುಕ್ತ ಚಾಲನೆ ದೊರೆಯಲಿದೆ.

Advertisement

ಮೈಸೂರು ಅರಮನೆ ಆವರಣದಲ್ಲಿ ಚಿನ್ನದ ಅಂಬಾರಿಯಲ್ಲಿ ಸರ್ವಾಲಂಕಾರ ಭೂಷಿತೆ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ.

ಶನಿವಾರ ಸಂಜೆ 4 ರಿಂದ 4.30ರೊಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಮೈಸೂರು ಅರಮನೆ ಬಲರಾಮ ದ್ವಾರದ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಮಧ್ಯಾಹ್ನ 1.41ರಿಂದ 2.10ರೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಐತಿಹಾಸಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡುವರು.

ನಂತರ ಸಂಜೆ 4 ರಿಂದ 4.30ರ ಒಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆಯ ಆವರಣದಲ್ಲಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಳಾಗುವ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡಲಿದ್ದಾರೆ.

ಈ ಬಾರಿಯ ದಸರಾ ಮೆರವಣಿಗೆಯಲ್ಲಿ 50ಕ್ಕೂ ಹೆಚ್ಚು ಸ್ತಬ್ಧ ಚಿತ್ರಗಳು ಸಾಗಿ ಬರಲಿದೆ. ಇದರೊಂದಿಗೆ 60ಕ್ಕೂ ಹೆಚ್ಚು ಜಾನಪದ ಕಲಾತಂಡಗಳು ಸರ್ಕಾರದ ಸಾಧನೆ, ಗ್ಯಾರಂಟಿ ಯೋಜನೆ, ಸಂವಿಧಾನ ಪ್ರಜಾಪ್ರಭುತ್ವ, ಪ್ರವಾಸಿ ತಾಣಗಳು, ಧಾರ್ಮಿಕ ಕೇಂದ್ರ, ಬುಡಕಟ್ಟು ಪರಂಪರೆ ಯಂತಹ ವೈವಿಧ್ಯಮಯ ಸ್ಥಬ್ಧ ಚಿತ್ರಗಳು ವಿಜಯದಶಮಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.

ಅರಮನೆಯಿಂದ ಹೊರಡಲಿರುವ ಜಂಬೂ ಸವಾರಿ ಮೆರವಣಿಗೆಯು ಉತ್ತರ ದ್ವಾರದ ಮೂಲಕ ತೆರಳಿ ಕೆಆರ್ ಸರ್ಕಲ್, ಸಯಾಜಿರಾವ್ ರಸ್ತೆ, ಸರ್ಕಾರಿ ಆಯುರ್ವೇದ ಸರ್ಕಲ್, ಬಂಬೂ ಬಜಾರ್, ಹೈವೇ ಸರ್ಕಲ್ ಮೂಲಕ ಸಾಗಿ ಸಂಜೆ ವೇಳೆಗೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನ ತಲುಪಲಿದೆ.

ಇದೇ ದಿನ ಸಂಜೆ ಬನ್ನಿಮಂಟಪ ಮೈದಾನದಲ್ಲಿ ಅತ್ಯಾಕರ್ಷಕ ಪಂಜಿನ ಕವಾಯತು ಪ್ರದರ್ಶನ ನಡೆಯಲಿದೆ.

ಜಂಬೂಸವಾರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ರಾಜವಂಶಸ್ಥರೂ ಸಂಸದರಾದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಸಚಿವರುಗಳಾದ ಶಿವರಾಜ್ ತಂಗಡಗಿ ಸೇರಿದಂತೆ ಸಂಪುಟದ ಇನ್ನಿತರ ಸಚಿವರು, ಶಾಸಕರು, ಸಂಸತ್ ಸದಸ್ಯರು ಭಾಗವಹಿಸ ಲಿದ್ದಾರೆ.

ಇವರೊಂದಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೇರಿದಂತೆ ಹಲವು ಅಧಿಕಾರಿಗಳು, ಗಣ್ಯರು ಸಹ ಭಾಗವಹಿಸಲಿದ್ದಾರೆ.

ಸಂಜೆ ಮೈಸೂರಿನ ಬನ್ನಿಮಂಟಪ ಮೈದಾನದಲ್ಲಿ ನಡೆಯಲಿರುವ ಅತ್ಯಾಕರ್ಷಕ ಪಂಚಿನ ಕವಾಯತು ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು.

Advertisement
Tags :
MysorePalace
Advertisement
Next Article