HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು-ಸಿಎಂ ಸಿದ್ದರಾಮಯ್ಯ

ಕರ್ನಾಟಕ ಗಾಂಧೀ ಸ್ಮಾರಕ ನಿಧಿ‌ ವತಿಯಿಂದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ‌ ಪಾಲ್ಗೊಂಡಿದ್ದರು.
05:20 PM Oct 02, 2024 IST | ಅಮೃತ ಮೈಸೂರು
Advertisement

ಬೆಂಗಳೂರು: ಈಗಿನ ನ್ಯಾಯಾಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ‌ ಹೇಳಿದರು.

Advertisement

ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ‌ ಅವರು ಮಹಾತ್ಮ ಗಾಂಧಿ ಅವರ ಮಾತನ್ನು ಸ್ಮರಿಸಿದರು.

ಕರ್ನಾಟಕ ಗಾಂಧೀ ಸ್ಮಾರಕ ನಿಧಿ‌ ವತಿಯಿಂದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿ ಸಿಎಂ ಮಾತನಾಡಿದರು.

ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂದು ತಿಳಿಸಿದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪ್ರಾಮಾಣಿಕ ನಾಯಕರು ಮತ್ತು ರಾಜಕಾರಣಿ ಇವರೆಲ್ಲರ ಬದುಕಿನ ಸಂದೇಶಗಳು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ನಾವು ಈ ಮಹಾತ್ಮರಿಗೆ ಸಲ್ಲಿಸುವ ಗೌರವ ಎಂದು ಸಿಎಂ ಹೇಳಿದರು.

ಗಾಂಧೀಜಿ ಅವರ ಹೋರಾಟದಿಂದಾಗಿ ನಾವು ಸ್ವಾತಂತ್ರ್ಯದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಜಗತ್ತಿನ ನಾಯಕರು ಎಂಬ ಗೌರವ ಸಿಕ್ಕಿರುವುದು ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದು ‌ಸಿದ್ದು‌ ಬಣ್ಣಿಸಿದರು.

ಕಾನೂನು ಸಚಿವ ಎಚ್.ಕೆ.ಪಾಟೀಲ್, ಗಾಂಧಿ ಸ್ಮಾರಕ‌‌ ನಿಧಿಯ ಊಡೆ ಪ.ಕೃಷ್ಣ,ಗಾಂಧಿ ಭವನ‌ ಕಾರ್ಯದರ್ಶಿ ವಿಶುಕುಮಾರ್ ಲೇಖಕ ನಟರಾಜ್ ಹುಳಿಯಾರ್ ಮತ್ತಿತರರು ಉಪಸ್ಥಿತರಿದ್ದರು.

Advertisement
Tags :
BangaluruGandhi Smaraka Bhavan
Advertisement
Next Article